ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಿದೇವಮ್ಮ ಚುನಾಯಿತರಾಗಿದ್ದಾರೆ.
ಹಿಂದಿನ ಅಧ್ಯಕ್ಷೆ ರವಣಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಗ್ರಾವ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು, ವಿಜೇತ ಅಭ್ಯರ್ಥಿ ಲಕ್ಷ್ಮಿದೇವಮ್ಮ 10 ಮತಗಳನ್ನು ಪಡೆದುಕೊಂಡಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಿದೇವಿ 7 ಮತಗಳನ್ನು ಪಡೆದುಕೊಂಡಿದ್ದಾರೆ. 1 ಮತ ತಿರಸ್ಕøತಗೊಂಡಿದೆ.
ಚುನಾವಣಾಧಿಕಾರಿ ಎನ್.ನಾರಾಯಣಸ್ವಾಮಿ, ಸಹಾಯಕ ಚುನಾವಣಾಧಿಕಾರಿ ಕೃಷ್ಣ, ಪಿಡಿಒ ಸವಿತ ಇದ್ದರು.
ಚುನಾವಣೆ ಬಳಿಕ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಚೇರಿ ಮುಂದೆ ವಿಜಯೋತ್ಸವ ಆಚರಿಸಿದರು. ಮುಖಂಡರಾದ ವೆಂಕಟರಾಮರೆಡ್ಡಿ, ಬೈರೆಡ್ಡಿ, ಒ.ಎಂ.ನಾರಾಯಣಸ್ವಾಮಿ, ಗಿರಿಯಪ್ಪ, ಶ್ರೀನಿವಾಸ್, ಶ್ರೀನಿವಾಸರೆಡ್ಡಿ ಇದ್ದರು.