

ಶ್ರೀನಿವಾಸಪುರ: ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮ ಪಂಚಾಯಿತಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಟಿ.ವಿ.ನಾಗೇಶ್‌ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಭಾರತಮ್ಮ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಒಟ್ಟು ಸದಸ್ಯರ ಸಂಖ್ಯೆ 17 ಆಗಿದ್ದು ಇಬ್ಬರು ಅಭ್ಯರ್ಥಿಗಳು ಗೈರಾಗಿದ್ದರು. ಹಾಗಾಗಿ ಟಿ.ವಿ.ನಾಗೇಶ್‌ರೆಡ್ಡಿ 11 ಮತ ಪಡೆದು ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಮಂಗಳ 4 ಮತ ಪಡೆದಿದ್ದಾರೆ. ಭಾರತಮ್ಮ 11 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಶಿಲ್ಪ 4 ಮತ ಪಡೆದಿದ್ದಾರೆ.
ಚುನಾವಣಾಧಿಕಾರಿ ಗಣೇಶ್, ಪಿಡಿಒ ವಿನೋಧ ಚುನಾವಣಾ ಕರ್ತವ್ಯ ನಿರ್ವಹಿಸಿದರು.
ಚುನಾವಣೆ ಬಳಿಕ ನಡೆದ ವಿಜಯೋತ್ಸವದಲ್ಲಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಎಂ.ವಿ.ಶ್ರೀನಿವಾಸ್, ಮುಖಂಡರಾದ ದಡಮಲದೂಡ್ಡಿ ಜಿ.ಎಸ್.ಆರ್ ಶ್ರೀನಾಥರೆಡ್ಡಿ, ಕೆ.ಎನ್.ಶಂಕರರೆಡ್ಡಿ, ಲಕ್ಷö್ಮಣರೆಡ್ಡಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.