ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಕೋಲಾರ : ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ , ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ . ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಪತ್ರಕರ್ತರ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ , ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು . ಸರ್ಕಾರ ಪತ್ರಕರ್ತರನ್ನು ಪ್ರಂಟ್‌ಲೈನ್ ವರ್ಕರ್ ಎಂದು ಘೋಷಿಸಿರುವುದು ಸಂತೋಷದ ವಿಷಯವಾಗಿದೆ . ಎಲ್ಲಾ ಪತ್ರಕರ್ತರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಇದರ ಸದುಪಯೋಗವನ್ನು ಸದ್ಬಳಕೆ ಮಾಡಿಕೊಳ್ಳಬೇಕು . ಇದುವರೆಗೆ 140 ಪತ್ರಕರ್ತರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು . ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ನೀಡುವುದರ ಬಗ್ಗೆ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ.ಮುನಿರಾಜು , ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ , ಖಜಾಂಚಿ ಎ.ಜಿ.ಸುರೇಶ್ ಕುಮಾರ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ