ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹೋತ್ಸವ ಆಚರಣೆ


ಕುಂದಾಪುರ: ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರುಗಳಾದ ವಂದನೀಯ ಗುರು ಅಶ್ವಿನ್ ಅರಾನ್ಹಾರವರು ವಹಿಸಿ “ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರೆ ಅದಕ್ಕೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮವಿದೆ. ಅದನ್ನು ನಾವು ಗಮನದಲ್ಲಿಟ್ಟುಕೊಂಡು ನಾವೆಲ್ಲ ಒಟ್ಟಾಗಿ ದೇಶದ ಅಭಿವೃದ್ಧಿಗಾಗಿ ದುಡಿಯಬೇಕಾಗಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವಿದ್ಯಾರ್ಥಿನಿ ಸ್ಟೆನಿಲ್ಲಾ ಡಿಸೋಜ ತನ್ನ ನೆಚ್ಚಿನ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸಿದಳು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಎ.ಸಿ. ಕಾರ್ಯಕ್ರಮದಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದೊಂದಿಗೆ ನಡೆದ ವಿವಿಧ ಪಂದ್ಯಾಟದಲ್ಲಿ ಬಹುಮಾನಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿನಿ ರೀಯಾ ಡಿಸೋಜಾ ಸ್ವಾಗತಿಸಿದರು. ವಿದ್ಯಾರ್ಥಿನಿ ಮರಿಯ ವಿಯೊಲ್ಲಾ ಬರೆಟ್ಟೊ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಅಲ್ವಿಟಾ ರೆಬೆಲ್ಲೊ ಕಾರ್ಯಕ್ರಮವನ್ನು ನಿರೂಪಿಸಿದರು.