

ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ಪತ್ರಕರ್ತರ ಭವನದಲ್ಲಿ ಕನಕ ಜಯಂತಿಯನ್ನು ಆಚರಿಸಲಾಯಿತು.
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿ. ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸಲಾಯಿತು.
ಕನಕದಾಸರು ತಮ್ಮ ಸಾಹಿತ್ಯ, ಕೀರ್ತನೆಗಳು ಹಾಗೂ ತತ್ವಪದಗಳ ಮೂಲಕ ಸಮಾಜದಲ್ಲಿ ಸಮಾನತೆ, ಮಾನವೀಯತೆ, ಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶ ಸಾರಿದ್ದಾರೆ. ಅವರ ವಿಚಾರಧಾರೆಗಳು ಸಮಾಜದ ಎಲ್ಲ ವರ್ಗದ ಜನರಿಗೆ ಮಾರ್ಗದರ್ಶನ ನೀಡುತ್ತಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಕೆ. ಉಪೇಂದ್ರ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಎಸ್. ಲಕ್ಷ್ಮಣ್ ಬಾಬು, ಉಪಾಧ್ಯಕ್ಷ
ಎಸ್. ಎಚ್. ನಾರಾಯಣ ಮೂರ್ತಿ, ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತ ಚೌಡಪ್ಪ ಹಾಗೂ ಸಂಘದ ಸದಸ್ಯ ಕಿಶೋರ್ ಉಪಸ್ಥಿತರಿದ್ದರು.

