

ಕಾಪು : ಲೋಕಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯದ ಮೀನುಗಾರ ಸಮಿತಿಯ ಅಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ವಿ ಸುವರ್ಣ ರವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರ ನಿರ್ದೇಶನದಂತೆ, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಲಾಲ್ ರವರ ಶಿಫಾರಸಿನ ಮೇರೆಗೆ ಗಿರೀಶ್ ವಿ ಸುವರ್ಣ ರವರನ್ನು ಆಯ್ಕೆ ಮಾಡಿ ನೇಮಕ ಮಾಡಲಾಗಿದ್ದು, ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಸೂಚಿಸಲಾಗಿದೆ.
ಗಿರೀಶ್ ವಿ ಸುವರ್ಣ ರವರು ಉದ್ಯಾವರ ಗ್ರಾಮ ಪಂಚಾಯತಿಗೆ ದ್ವಿತೀಯ ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದು, ಮೀನುಗಾರಿಕಾ ಮೀನು ಉತ್ಪನ್ನ ಸಾಮಗ್ರಿಗಳ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹಿರಿಯಡ್ಕದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯಕುಮಾರ್ ಸೊರಕೆ ಅವರ ಸಮ್ಮುಖದಲ್ಲಿ, ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಗಿರೀಶ್ ವಿ ಸುವರ್ಣ ರವರಿಗೆ ಆದೇಶ ಪ್ರತಿ ಹಸ್ತಾಂತರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ, ಬ್ಲಾಕ್ ಮಟ್ಟದ ನಾಯಕರುಗಳು ಉಪಸ್ಥಿತರಿದ್ದರು.

