ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರದ ಆರ್.ಎನ್. ಶೆಟ್ಟಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಕ್ಕೆ ಆಯ್ಕೆ

JANANUDI.COM NETWORK

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ, ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ, ಕುಂದಾಪುರದ ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಲ್ಕಾ ಜೋಬಿ 52-56ಕೆಜಿ ವಿಭಾಗದಲ್ಲಿ ಪ್ರಥಮ ಹಾಗೂ ಪ್ರತೀಕ್ಷಾ 40-44ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.