ಕೋಲಾರ,ಜ.01: ಕನ್ನಡ ಪರ ಹೋರಾಟಗಾರ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಮತ್ತು ಕಾರ್ಯಕರ್ತರ ಮನೆಗಳಿಗೆ ಪೆÇಲೀಸರು ತೆರಳಿ ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕ.ರ.ವೇ ಜಿಲ್ಲಾ ಅಧ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಸೋಮವಾರ ಜಿಲ್ಲಾಡಳಿತ ಭವನದ ಬಳಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಕಳೆದ ತಿಂಗಳ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸುವುದವರ ವಿರುದ್ದ ನಡೆಸಿದ ಪ್ರತಿಭಟನೆಯಲ್ಲಿ ಕ.ರ.ವೇ. ರಾಜ್ಯ ಅಧ್ಯಕ್ಷ ಟಿ.ಎ.ನಾರಾಯಣಗೌಡರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದು, ತಕ್ಷಣ ಬೇಷರತ್ತಾಗಿ ಸರ್ಕಾರ ಕನ್ನಡ ಕನ್ನಡಕ್ಕೆ ಪರ ಹೋರಾಟಗಾರ ಹಾಗೂ ಕ.ರ.ವೇ.ರಾಜ್ಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡರನ್ನು ಹಾಗೂ ಕಾರ್ಯಕರ್ತರನ್ನು ತಕ್ಷಣ ಬೇಷರತ್ತಾಗಿ ಸರ್ಕಾರದ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಸರ್ಕಾರದ ಆದೇಶದಂತೆ ಅಂಗಡಿ-ಮುಂಗಟ್ಟುಗಳ, ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯಾಪಾರ ಸಂಸ್ಥೆಗಳು, ಸಮಾಲೋಚನ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನೆ ಕೇಂದ್ರಗಳು ಹೋಟೆಲ್ಗಳು, ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ದೇವಾಲಯಗಳು, ಚರ್ಚುಗಳು, ಮಸೀದಿಗಳು ತಮ್ಮ ನಾಮ ಫಲಕಗಳಲ್ಲಿ ಹಾಗೂ ಜಾಹಿರಾತು ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಫೆಬ್ರವರಿ 28 ರ ಒಳಗೆ ಅಳವಡಿಸಿಕೊಳ್ಳಬೇಕು ಇಲ್ಲದಿದ್ದರೆ ಕ.ರ.ವೇ ಉಗ್ರ ಹೋರಾಟ ಮಾಡಲಾಗುವುದೆಂದು ಅವರು ಎಚ್ಚರಿಕೆ ನೀಡಿದರು.
ಈಗಾಗಲೇ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕನ್ನಡ ಭಾಷೆಯ ಅಳವಡಿಸುವುದರ ಬಗ್ಗೆ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರದ ಆದೇಶದಂತೆ ನಾಮ ಫಲಕಗಳಲ್ಲಿ 60 ರಷ್ಟು ಕನ್ನಡ ಭಾಷೆಯನ್ನು ಬಳಸಲು ಸೂಕ್ತ ಕ್ರಮ ಕೈ ಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕ.ರ.ವೇ ಜಿಲ್ಲಾ ಗೌರವ ಅಧ್ಯಕ್ಷ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್, ರೈತ ಘಟಕದ ಉಪಾಧ್ಯಕ್ಷ ಶಂಕರರೆಡ್ಡಿ,ವಿದ್ಯಾರ್ಥಿ ಘಟಕದ ಯಶ್ವಂತ್, ಚಂದನ್, ಶ್ರೀಕಾಂತ್, ಗುರುಕಿರಣ್, ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.