JANANUDI.COM NETWORK

ನವದೆಹಲಿ: ಬಿಹಾರ, ಗುಜರಾತ್, ಜಾರ್ಖಂಡ್, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಟಾಂ, ಮಹಾರಾಷ್ಟ್ರ, ಒಡಿಶಾ ಹಾಗೂ ಕರ್ನಾಟಕ ಸೇರಿದಂತೆ ಹಲವು. ರಾಜ್ಯಗಳಲ್ಲಿ ಮುಂದಿನ ನಾಲ್ಕು ದಿನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಾರುತಗಳು ಕರಾವಳಿಗೆ ಅಪ್ಪಳಿಸುತ್ತಿವೆ. ಜೊತೆಗೆ ಗಾಳಿ ಕೂಡ ಭಾರಿ ವೇಗದಲ್ಲಿ ಬೀಸುತ್ತಿರುವ ಕಾರಣದಿಂದ ಹವಮಾನದಲ್ಲಿ ಬದಲಾವಣೆ ಉಂಟಾಗಿ ಗುಡುಗು ಸಹಿತ ಮಳೆಯಾಗುತ್ತಿದೆ.