JANANUDI.COM NETWORK

ಬೆಂಗಳೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಇಂದು ಸಭೆ ಸೇರಿ ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಸುಮಾರು 35ಕ್ಕೂ ಅಧಿಕ ಸಂಘಟನೆಗಳಿಂದ ಕರ್ನಾಟಕ ಬಂದ್‍ಗೆ ಬೆಂಬಲ ಸಿಕ್ಕಿದೆಯೆಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಹೇಳಿದರು.
ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್‍ಗೆ ನಿರ್ಧಾರ ಮಾಡಲು ಮುಂದಾಗಿದ್ದವು. ಆದರೆ, ಈ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಮೂಡಿರಲಿಲ್ಲ. ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿμÉೀಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ನಿರ್ಧಾರ ಮಾಡಲು ಸಭೆ ಸೇರಲು ನಿರ್ಧರಿಸಿದ್ದವು.
ಅದರಂತೆ, ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6 ರ ತನಕ ಎಲ್ಲಾ ಚಟುವಟಿಕೆ ಬಂದ್ ಆಗಲಿವೆ..
ಎಂಇಎಸ್ ಸಂಘಟನೆ ನಿμÉೀಧಕ್ಕೆ ಆಗ್ರಹಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಇಂದು ಮಹತ್ವದ ಸಭೆ ನಡೆಸಲಾಗಿದೆ. ಸದ್ಯಕ್ಕೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಆಚರಿಸಲು ಕರೆ ನೀಡಲಾಗಿದೆ. ಅಂದು ಬೃಹತ್ ಜಾಥಾ, ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾಮೆರ್ಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಸೇರಿದಂತೆ ಸುಮಾರು 35 ಸಂಘಟನೆಗಳಿಂದ ಕರ್ನಾಟಕ ಬಂದ್‍ಗೆ ಬೆಂಬಲ ಸಿಕ್ಕಿದೆ ಎಂದು ತಿಳಿಸಲಾಗಿದೆ.