ಜು. 22: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ಜು. 21 ರಂದು ನಂತೂರಿನ ಸಂದೇಶ ಪ್ರತಿಷ್ಠಾನದಲ್ಲಿ ಕೊಂಕಣಿ ಲೇಖಕರ ಸಂವಾದ ಕಾರ್ಯಕ್ರಮ ನಡೆಯಿತು.
ಸಂವಾದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಶ್ರೀಮತಿ ಐರಿನ್ ರೆಬೆಲ್ಲೋ,ಸಂದೇಶ ಪ್ರತಿಷ್ಠಾನದ ನಿರ್ದೇಶಕರಾದ ವಂದನೀಯ ಫಾ. ಸುದೀಪ್ ಪೌಲ್,ಅಕಾಡೆಮಿಯ ಸದಸ್ಯರುಗಳಾದ ನವೀನ್ ಲೋಬೊ, ಸಪ್ನಾ ಕ್ರಾಸ್ತಾ, ರೋನಾಲ್ಡ್ ಕ್ರಾಸ್ತಾ, ದಯಾನಂದ್ ಮಡ್ಕೆಕರ್ ಹಾಗೂ ಸಮರ್ಥ್ ಭಟ್ ಉಪಸ್ಥಿತರಿದ್ದರು.
ಕೊಂಕಣಿಯ ಸರಿಸುಮಾರು 75ಕ್ಕೂ ಮಿಗಿಲಾಗಿ ಲೇಖಕರು ಹಾಗೂ ಕವಿಗಳು ಭಾಗವಹಿಸಿ ಉತ್ತಮ ರೀತಿಯಲ್ಲಿ ವಿಚಾರಗಳನ್ನು ಮಂಡಿಸಿದರು.