ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ನ್ಯಾಯಬೆಲೆ ಅಂಗಡಿಗಳಲ್ಲಿ ಅವ್ಯವಹಾರ ತಡೆಯುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆ ಇಂದಿರಾ ರಾಘವರೆಡ್ಡಿ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರು ಅವ್ಯಾವಹಾರ ತಡೆಯಬೇಕು ಎಂದು ಆಗ್ರಹಿಸಿದರು.
ನ್ಯಾಯಬೆಲೆ ಅಂಗಡಿ ಮಾಲೀಕರು ಕಾನೂನು ಬಾಹಿರವಾಗಿ ಗ್ರಾಹಕರಿಂದ ಹೆಚ್ಚು ಹಣ ವಸೂಲು ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸುವ ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆಗಳಿಗೆ ಕೊರತೆಯಿಲ್ಲ. ಇಷ್ಟಾದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಪಾದಿಸಿದರು.
ತಾಲ್ಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರ ಬಳಕೆಗಾಗಿ ಶುದ್ಧ ಕುಡಿಯವ ನೀರು ಘಟಕ ಸ್ಥಾಪಿಸಬೇಕು. ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ಶೌಚಾಲಯ ವ್ಯವಸ್ಥೆ ಮಾಡಬೇಕು. ಮಹಿಳೆಯರ ಸುರಕ್ಷತೆ ಬಗ್ಗೆ ವಿಶೇಷ ಗಮನ ಹರಿಸಬೇಕು. ಕಚೇರಿಯ ಒಳಗೆ ಹಾಗೂ ಹೊರಗೆ ಸಿಸಿ ಟಿವಿ ಅಳವಡಿಸಬೇಕು. ಇದರಿಂದ ಕರ್ತವ್ಯ ನಿರ್ವಹಣೆ ಪಾರದರ್ಶಕವಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‍ಗೆ ನೀಡಲಾಯಿತು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಜಿ.ಕೆ.ಆನಂದ್, ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯಪ್ಪ, ಮುಖಂಡರಾದ ಶಶಿಶೇಖರ್, ವೆಂಕಟರವಣಪ್ಪ, ರಾಜು ಎಂ.ಪಾವನ್, ಆನಂದ್ ಇದ್ದರು.