ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.23 ವರೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

JANANUDI.COM NETWORK


ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಸೇರಿದಂತೆ ಫೆಬ್ರುವರಿ 23 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಯುಭಾರ ಕುಸಿತದಿಂದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ದಾವಣಗೆರೆ, ಚಿತ್ರದುರ್ಗ, ಕೊಡಗು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಹಲವೆಡೆ ಬೆಳೆ ನಾಶವಾಗಿದೆ.