ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಮನೆಗಳಲ್ಲಿ ಬೀಳುವ ಹಸಿ ಕಸದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ಬಳಸಿಕೊಳ್ಳಬೇಕು ಎಂದು ಪುರಸಭೆಯ ಸ್ವಚ್ಛತಾ ರಾಯಭಾರಿ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು.
ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಾಂಪೋಸ್ಟ್ ತಯಾರಿಕಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಪುರಸಭಾ ನಿಯಮದಂತೆ ಪ್ರತಿ ಮನೆಯಲ್ಲೂ ಹಸಿ ಕಸ ಹಾಗೂ ಒಣ ಕಸ ಎಂದು ವಿಭಾಗಿಸಲಾಗುತ್ತದೆ. ಹಸಿ ಕಸವನ್ನು ಕಡಿಮೆ ಖರ್ಚಿನಲ್ಲಿ, ಸರಳ ವಿಧಾನದ ಮೂಲಕ ಕಾಂಪೋಸ್ಟ್ ಗೊಬ್ಬರ ತಯಾಸಿ ಹಿತ್ತಲ ತೋಟದ ಗಿಡಗಳಿಗೆ ಬಳಸಿಕೊಳ್ಳಬಹುದಾಗಿದೆ. ಬೇಡವಾದಲ್ಲಿ ಮಾರಾಟಮಾಡಿ ಹಣ ಗಳಿಸಬಹುದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟ್ಟಣದ ನಾಗರಿಕರಿಗೆ ಪೈಪ್ ಬಳಸಿ ಕಾಂಪೋಸ್ಟ್ ತಯಾರಿಸುವ ಬಗ್ಗೆ ಪ್ರಾತ್ಯಕ್ಷತೆ ಏರ್ಪಡಿಸಲಾಗಿತ್ತು. ತಾಲ್ಲೂಕು ಪಂಚಾಯಿತಿ ಸದಸ್ಯೆ ನಾಗವೇಣಿ ರೆಡ್ಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಘಟಕದ ಯೋಜನಾಧಿಕಾರಿ ಸುರೇಶ್ ಗೌಡ, ಕೃಷಿ ಅಧಿಕಾರಿ ಅರುಣ್ ಕುಮಾರ್, ಮೇಲ್ವಿಚಾರಕಿ ಜ್ಯೋತಿ, ಸೇವಾ ಪ್ರತಿನಿಧಿಗಳಾದ ಜಗದಾಂಬ ಇದ್ದರು.