ಕೆದಿಂಜೆ : ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು

ಕೆದಿಂಜೆ : ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ
ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕೆದಿಂಜೆ ಶಾಲಾ ಸಭಾಂಗಣದಲ್ಲಿ ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಜರಗಿತು.
ಉಡುಪಿ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಅವರು ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ, ಬಾಲ್ಯವಿವಾಹ, ಪೋಕ್ಸೋ ಕಾಯಿದೆ ಕುರಿತು ಮಾಹಿತಿ ನೀಡಿದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್, ಸಹಶಿಕ್ಷಕಿ ರೇಖಾ ಪೈ, ಕೆದಿಂಜೆ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಶಾಲಾ ಗೌರವ ಶಿಕ್ಷಕಿಯರಾದ ಮಮತಾ ಜೆ., ಜಯಲಕ್ಷಿö್ಮÃ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಮೊದಲಾದವರಿದ್ದರು.