ಮಂಗಳೂರು: ನಗರದ ಕೋಟೆಕಣಿಯ ಮನೆಯೊಂದಕ್ಕೆ ಕಿಟಕಿ ಸರಳು ಕತ್ತರಿಸಿ ನುಗ್ಗಿ ವೃದ್ಧದಂಪತಿಯನ್ನು ಬೆದರಿಸಿ ಲಕ್ಷಾಂತರ ಮೌಲ್ಯದ
ಕಾರು, ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಚಡ್ಡಿಗ್ಯಾಂಗ್ ಅನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿ ಕಂಬಿ
ಹಿಂದೆ ಕಳುಹಿಸಿದೆ.
ಬಂದಿತರಾದವರು ಮಧ್ಯಪ್ರದೇಶ ರಾಜ್ಯ ಮೂಲದ ರಾಜು ಸಿಂಗ್ವಾನಿಯ(24), ಮಯೂರ್(30), ಬಾಲಿ(22), ವಿಕ್ಕಿ(21) ಬಂಧಿತ ಚಡ್ಡಿಗ್ಯಾಂಗ್ ದರೋಡೆಕೋರರು.
ಜುಲೈ 9ರ ನಸುಕಿನ ಜಾವ 4ಗಂಟೆ ಸುಮಾರಿಗೆ ಬರ್ಮುಡಾ ಚಡ್ಡಿ, ಬನಿಯನ್ ಧರಿಸಿರುವ ನಾಲ್ವರ ತಂಡ ಕೋಟಿಕಣಿ ರಸ್ತೆಯ ವಿಕ್ಟರ್ – ಪಾಟ್ರಿಷಿಯಾ ದಂಪತಿ, ಹಿರಿಯ ನಾಗರಿಕರ ಮನೆ ಕಿಟಕಿಯ ಗ್ರಿಲ್ ಕತ್ತರಿಸಿ ಒಳನುಗ್ಗಿದ ಖತರ್ನಾಕ್ ಚೆಡ್ಡಿ ಗ್ಯಾಂಗ್ ನಗದು ಹಣಕ್ಕಾಗಿ ಪೀಡಿಸಿದ ತಂಡ ವಿಕ್ಠರ್ವರಿಗೆ ರಾಡಿನಿಂದ ಹಲ್ಲೆಗೈದು ಅವರ ಪತ್ನಿಗೂ ಹಲ್ಲೆಗೈದು ಬೊಬ್ಬೆ ಹಾಕದಂತೆ, ಯಾರಿಗೂ ಫೋನ್ ಮಾಡದಂತೆ ಬೆದರಿಸಿದೆ. ಬಳಿಕ ಕಪಾಟಿನಲ್ಲಿದ್ದ 12 ಲಕ್ಷ ಮೌಲ್ಯದ ಚನ್ನ,ವಜ್ರದಾಭರಣ, ಮೊಬೈಲ್ ಮತ್ತು 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್’ಗಳು, 3ಸಾವಿರ ನಗದು ಸುಲಿಗೆ ಮಾಡಿದೆ. ಅಲ್ಲದೆ ಕದ್ದ ಮನೆಯವ ಕಾರಿನ ಕೀ ಸೆಳೆದುಕೊಂಡು, ಕಾರಿನ ಸಮೇತ ಪರಾರಿಯಾಗಿತ್ತು, ಅದೇ ಕಾರಿನಲ್ಲಿ ಮೂಲ್ಕಿ ವರೆಗೆ ಸಾಗಿ, ಅಲ್ಲಿಂದ ಕೆ.ಎಸ್.ಆರ್. ಟಿ.ಸಿ ಬಸ್ಸಿನಲ್ಲಿ ಸಾಗಿದಾಗ, ಇದನ್ನು ಸಿ.ಸಿ.ಕೆಮರಾದಲ್ಲಿ ಸೆರೆಯದದನ್ನು ಕಂಡು ಪೊಲೀಸ್ ಆಯುಕ್ತರ ಅನುಪಮ್ ಅಗರ್ವಾಲ್ ಇವರ ನಿರ್ದೇಶನದಂತೆ, ಕೆ.ಎಸ್.ಆರ್. ಟಿ.ಸಿ ಯ ಸಹಕಾರದಿಂದ 5 ಗಂಟೆಯ ಒಳಗೆ ಸಕಲೇಶಪುರದಲ್ಲಿ ಬಂದಿಸಲಾಗಿತ್ತು.
ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ(ಮಂಗಳವಾರ) ಚಡ್ಡಿ ಗ್ಯಾಂಗ್ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ ಕರೆ ತಂದಿದ್ದರು. ಮಹಜರು ವೇಳೆ ಈ ಇಬ್ಬರು ಪೊಲೀಸರ ಮೇಲೆ ಕೂಡ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿಗಳಾದ ರಾಜು ಸಿಂಗ್ವಾನಿಯಾ ಮತ್ತು ಬಾಲಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.