JANANUDI.COM NETWORK
ಕೀವ್: ಉಕ್ರೇನ್‌ನ ದೊಡ್ಡ ನಗರಗಳಲ್ಲಿ ಒಂದಾದ ಖೆರ್ಸನ್ ನಗರವನ್ನು ರಷ್ಯಾ ಪಡೆ ವಶಪಡಿಸಿಕೊಂಡಿದೆ. ರಷ್ಯಾ ಪಡೆ ಉಕ್ರೇನ್ ಮೇಲೆ ಆಕ್ರಮಣ ನಡೆಸಲು ಆರಂಭಿಸಿ.ವಾರವಾಗಿದ್ದು, ವಶಕ್ಕೆ ಪಡೆದ ಮೊದಲ ನಗರ ಇದಾಗಿದೆ ಎಂದು ತಿಳಿದು ಬಂದಿದೆ.. ಖೆರ್ಸನ್ ನಗರವನ್ನು ರಷ್ಯಾ ವಶಕ್ಕೆ ಪಡೆದಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.
‘ನಗರದ ಎಲ್ಲ ಭಾಗಗಳ ಸುತ್ತಲೂ ರಷ್ಯಾ ಸೇನೆ ಸುತ್ತುವರಿದಿದ್ದು, ಭಾರಿ ಅಪಾಯಕಾರಿ ಸ್ಥಿತಿ ಉಂಟಾಗಿದೆ ಎಂದು ಸ್ಥಳೀಯ ಆಡಳಿತದ ಮುಖ್ಯಸ್ಥ ಗೆನ್ನೆಡಿ ಲಖುತ ಬುಧವಾರ ರಾತ್ರಿ ಟೆಲಿಗ್ರಾಮ್‌ನಲ್ಲಿ ಸಂದೇಶ ರವಾನಿಸಿದ್ದಾರೆ. ಕಪ್ಪು ಸಮುದ್ರದ ಪ್ರಮುಖ ಬಂದರು ನಗರವಾಗಿರುವ ಖೆರ್ಸನ್‌ನ ಮೇಯರ್ ಇಗೊರ್ ಕೊಲೈಖೈವ್ ಅವರು ರಷ್ಯಾ ಪಡೆಯ ಜೊತೆ ಮಾತುಕತೆ ನಡೆಸಿದ್ದಾರೆ ಎಂದು
ಸುದ್ದಿ ಸಂಸ್ಥೆ ‘ಎಎಫ್‌ಪಿ’ ವರದಿ ಮಾಡಿದೆ. ‘ನಮ್ಮ ಬಳಿ ಆಯುಧಗಳಿಲ್ಲ ಮತ್ತು ನಾವು ಆಕ್ರಮಣಕಾರಿಗಳಲ್ಲಆದರೆ ನಮ್ಮ ನಗರವನ್ನು ರಕ್ಷಿಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದೇವೆ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಇಗೊರ್ ಕೊಲೈಖೈವ್ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.