ಬೆಂಗಳೂರು,ನ.25:ಭ್ರೂಣ ಪತ್ತೆ ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಭ್ರೂಣಗಳನ್ನು ಪತ್ತೆ ಮಾಡಿ ಅಬಾರ್ಷನ್ ಮಾಡಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 900 ಭ್ರೂಣ ಹತ್ಯೆ ಮಾಡಿರೋದು ತಿಳಿದು ಬಂದಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ನಾಲ್ವರು ಗರ್ಭಿಣಿಯರನ್ನು ಸ್ಕ್ಯಾನ್ ಮಾಡಿಸುತ್ತಿದ್ದರು.ಇದು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದಾಗ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹೆಸರಿನವರನ್ನು ಬಂಧಿಸಲಾಗಿತ್ತು.
ಆರೋಪಿಗಳ ತನಿಖೆ ಬೆನ್ನಲ್ಲೇ ಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯರೂ ಸಹ ಬಂಧಿತರಾಗಿದ್ದರು.. ಚೆನ್ನೈ ಮೂಲದ ಡಾ.ತುಳಸಿರಾಮ್, ಡಾ.ಚಂದನ್ ಬಲ್ಲಾಳ್ ಹಾಗೂ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ರೀಜ್ಮಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ನನ್ನು ಬಂಧಿಸಲಾಗಿತ್ತು. ಒಟ್ಟು ಒಂಬತ್ತು ಮಂದಿ ಸೇರಿ ವ್ಯವಸ್ಥಿತವಾಗಿ ಭ್ರೂಣ ಹತ್ಯೆ ಮಾಡುವ ಕೃತ್ಯ ಎಸೆಗುತ್ತಿದ್ದರು. ಆರೋಪಿಗಳು ತಿಂಗಳಲ್ಲಿ 20 ರಿಂದ 25 ಭ್ರೂಣ ಹತ್ಯೆ ಮಾಡುತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕೃತ್ಯ ಎಸಗುತ್ತಿರೋದು ಬೆಳಕಿಗೆ ಬಂದಿದ್ದು,.ಮೈಸೂರಿನ ಉದಯಗಿರಿಯಲ್ಲಿನ ಮಾತಾ ಆಸ್ಪತ್ರೆ ಮತ್ತು ರಾಜ್ ಕುಮಾರ್ ರಸ್ತೆಯ ಆಯುರ್ವೇದ ಫೈಲ್ಸ್ ಡೇ ಕೇರ್ ಸೆಂಟರ್ ಅನ್ನು ಇದೇ ವೇಳೆ ಪೊಲೀಸರು ಸೀಜ್ ಮಾಡಿದ್ದರೆ. ಆಯುರ್ವೇದ ಡೇ ಕೇರ್ ಸೆಂಟರ್ನಲ್ಲಿಯೇ ಭ್ರೂಣ ಹತ್ಯೆ ನಡೆಯುತಿತ್ತು ಅನ್ನೋದು ತನಿಖೆಯಿಂದ ಬಯಲಾಗಿದೆ.