

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಈ ನೇಮಕಾತಿ ಆದೇಶ ಹೊರಡಿಸಿದೆ
ಈ ಹಿಂದೆ ಜಿಲ್ಲಾ ಕಾಂಗ್ರೆಸ್ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರು ಬಳಿಕ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪಕ್ಷದ ವಿವಿಧ ಹೋರಾಟಗಳು, ಸಂಘಟನಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಅವರು, ಇದೀಗ ಜಿಲ್ಲಾ ಅಧ್ಯಕ್ಷರಾಗಿ ಮಹತ್ವದ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ.

