
ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಫಲಾನಭವಿಗಳ ಆಯ್ಕೆ ದಿನಾಂಕ: 29.12.2023 ರಂದು ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷರವರ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿಯಲ್ಲಿ ವಿವರವಾಗಿ ಚರ್ಚಿಸಿ ಫಲಾನುಭವಿಗಳನ್ನು ಲಾಟರಿ ಎತ್ತುವ ಮುಖಾಂತರ ನಿಗದಿತ ಗುರಿಯಂತೆ ಆಯ್ಕೆ ಮಾಡಲಾಯಿತು.
2023-2024 ನೇ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು 653 ಅರ್ಜಿಗಳು ಸ್ವೀಕೃತಗೊಂಡಿದ್ದು ಸರ್ಕಾರ ನಿಗಧಿಪಡಿಸಿದ ಅರ್ಥಿಕ ಗುರಿ ರೂ.18 ಲಕ್ಷಗಳನ್ನು ನಿಗಧಿಪಡಿಸಿದ್ದು, ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 15 ಫಲಾನುಭವಿಗಳನ್ನು ಲಾಟರಿ ಎತ್ತುವ ಮುಖಾಂತರ ಆಯ್ಕೆ ಮಾಡಿ ಒಟ್ಟು ರೂ.18 ಲಕ್ಷಗಳ ಅರ್ಥಿಕ ಸೌಲಭ್ಯವನ್ನು ಮಂಜೂರು ಮಾಡಲು ಸಭೆಯಲ್ಲಿ ಅನುಮೋದಿಸಲಾಯಿತು.
ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ, ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಪದ್ಮ ಬಸವಂತಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯಾದ ಮುರಳಿ, ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಶೀರಿನ್ ತಾಜ್ ಮತ್ತು ಇತರೆ ಆಯ್ಕೆ ಸಮಿತಿಯ ಸದಸ್ಯರು ಹಾಜರಿದ್ದರು.
