

ಕೋಲಾರ : 2025-26ನೇ ಸಾಲಿನ ಕೋಲಾರ ಜಿಲ್ಲೆಯ “ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶಿಕ್ಷಕರ ಕಾರ್ಯಪರಿಣಾಮ, ವಿದ್ಯಾರ್ಥಿಗಳಲ್ಲಿ ತಂದ ಬದಲಾವಣೆ ಹಾಗೂ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಜಿಲ್ಲಾ ಆಯ್ಕೆ ಸಮಿತಿಯು ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.
ಈ ಬಾರಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಸರ್ಕಾರಿ ಉರ್ದು ಶಾಲೆಯ ಇಬ್ಬರು ಶಿಕ್ಷಕರು ಪ್ರಶಸ್ತಿ ಪಡೆದಿದ್ದಾರೆ. ಮುಳಬಾಗಿಲು ತಾಲ್ಲೂಕಿನ ಕುರುಬರಪೇಟೆ ಮೈನ್ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರೀ ಫೈಜುಲ್ಲಾ ಎಂ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಸಹ ಶಿಕ್ಷಕಿಯಾದ ಯಾಸ್ಮಿನಾ ಬೇಗಂ ಅವರನ್ನು ಗೌರವಿಸಲಾಗಿದೆ.
ಪುರಸ್ಕೃತರಿಗೆ ಶೀಘ್ರದಲ್ಲೇ ನಡೆಯಲಿರುವ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಅಧಿಕೃತವಾಗಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

