

ಕೋಲಾರ.ಜೂ,05: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿ ವರ್ಷದಂತೆ ಈ ಬಾರಿಯೂ ಜುಲೈ 1 ರಂದು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಪತ್ರಕರ್ತರ ಮಕ್ಕಳು 2023 -2024 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಹಾಗೂ ಯಾವುದೇ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಜೂನ್ 10 ರೊಳಗಾಗಿ ಅರ್ಹ ವಿದ್ಯಾರ್ಥಿಗಳು ಪತ್ರಕರ್ತ ತಂದೆ/ತಾಯಿಯ ಹೆಸರು, ಅಂಕಪಟ್ಟಿ, ಭಾವಚಿತ್ರದ ಸಮೇತ ಸ್ವಬರಹದ ಅರ್ಜಿಗಳನ್ನು ಕೋಲಾರದ ಪತ್ರಕರ್ತರ ಭವನಕ್ಕೆ ಕಚೇರಿ ವೇಳೆಯಲ್ಲಿ ತಲುಪಿಸಲು ಕೋರಿದೆ. ಜೂನ್ 10ರ ನಂತರ ಬರುವ ಯಾವುದೇ ಅರ್ಜಿಗಳನ್ನು ಪುರಸ್ಕಾರಕ್ಕೆ ಪರಿಗಣಿಸುವುದಿಲ್ಲ.
ಜಿಲ್ಲೆಯ ಪತ್ರಕರ್ತರು ತಮ್ಮ ಪ್ರತಿಭಾವಂತ ಮಕ್ಕಳ ಅರ್ಜಿಗಳನ್ನು ಸಕಾಲಕ್ಕೆ ತಲುಪಿಸಿ ಪುರಸ್ಕಾರಕ್ಕೆ ಸಹಕರಿಸಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.