ಕೋಲಾರ: ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರ ನೇತೃತ್ವದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ 28ನೇ ಸ್ಥಾನದಲ್ಲಿದ್ದ ಕೋಲಾರ ಜಿಲ್ಲೆ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ಒದಗಿಸುವ ಮೂಲಕ ರಾಜ್ಯದಲ್ಲಿಯೇ ಸತತವಾಗಿ 2ನೇ ಬಾರಿಗೆ ಅಗ್ರಸ್ಥಾನಕ್ಕೇರಿದೆ.
ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರೊಂದಿಗೆ ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರು ಸಂಪೂರ್ಣವಾಗಿ ಸಹಕಾರ ಮತ್ತು ಬೆಂಬಲ ನೀಡುವ ಮೂಲಕ ಕೋಲಾರ ಜಿಲ್ಲೆಯನ್ನು ಕರ್ನಾಟಕ ರಾಜ್ಯದ ಭೂಪಟದಲ್ಲಿ ಮಿಂಚುವಂತೆ ಮಾಡಿದ್ದಾರೆ.
45 ವಿಧವಾದ ಪ್ರಮಾಣ ಪತ್ರಗಳು ನೆಮ್ಮದಿ ಕೇಂದ್ರ( ಪ್ರಸ್ತುತ ಅಟಲ್ ಜನಸ್ನೇಹಿ ಕೇಂದ್ರ ಎಂದು ಖ್ಯಾತಿ ಹೊಂದಿದೆ) ಮೂಲಕ ವಿತರಿಸಲಾಗುತ್ತದೆ ಕಳೆದ ತಿಂಗಳಿನಲ್ಲಿ 30000ಕ್ಕೂ ಅಧಿಕ ಪ್ರಮಾಣಪತ್ರಗಳನ್ನು ನಿಗದಿತ ಸಮಯದಲ್ಲಿ ನೀಡುವ ಮೂಲಕ ಕೋಲಾರ ಜಿಲ್ಲಾಡಳಿತ ಗಮನ ಸೆಳೆದಿದೆ.
ಕರ್ನಾಟಕದಲ್ಲಿ 28ನೇ ಸ್ಥಾನದಲ್ಲಿದ್ದ ಕೋಲಾರ ಜಿಲ್ಲೆ ಕಾಲಕ್ರಮೇಣ 25, 20, 18, 15, 10, 5, ಇದೀಗ ಸತತವಾಗಿ ಎರಡು ತಿಂಗಳಿಂದ ಪ್ರಥಮ ಸ್ಥಾನವನ್ನು ಕಾಯ್ದರಿಸುವ ಮೂಲಕ ದಾಖಲೆ ಮಾಡಿದೆ.
ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ಸಕಾಲದಲ್ಲಿ ಒದಗಿಸುವ ಮೂಲಕ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ಅತ್ಯುತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ ಎಂಬುದಕ್ಕೆ ಇದು ಜೀವಂತ ನಿದರ್ಶನವಾಗಿದ್ದು ಸಾರ್ವಜನಿಕರು ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಗಳ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.