

ಕೊಲ್ಲೂರು: ತಾಯಿ ಮೃತಪಟ್ಟ ಶೋಕದಿಂದ ಪುತ್ರ ಮಾನಸಿಕವಾಗಿ ನೊಂದು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಪುತ್ರ ವಿಶ್ವನಾಥ (37) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ. ತಾಯಿ ಗಿರಿಜಮ್ಮ (63) ಅವರು ಅ. 26ರಂದು ಜೀವನದಲ್ಲಿ ಜುಗುಪ್ಸೆಗೊಂಡು ಕೀಟನಾಶಕ ಸೇವಿಸಿದ್ದರು. ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಧ್ಯರಾರಿಯಲ್ಲಿ ಮೃತಪಟ್ಟಿದ್ದರು. ಮೃತರ ಅಂತ್ಯಸಂಸ್ಕಾರ ಮುಗಿಸಿದ ಬಳಿಕ ಮನೆಯಲ್ಲಿ ಪತಿ ಮತ್ತು ಪುತ್ರ ಮಲಗಿದ್ದರು. ಬೆಳಗ್ಗೆ ಪುತ್ರನ ಬಾಯಿಯಲ್ಲಿ ನೊರೆ ಬರುತ್ತಿರುವುದನ್ನು ಗಮನಿಸಿದ ಮನೆಯವರು ಸಂಶಯದಿಂದ ಆಸ್ಪತ್ರೆಗೆ ಕೊಂಡೊಯ್ದು ಪರೀಕ್ಷಿಸಿದಾಗ ವೈದ್ಯರು ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಖಚಿತಪಡಿಸಿದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.