

ಶ್ರೀನಿವಾಸಪುರ : ಪ್ರತಿನಿತ್ಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸು ಪ್ರಕ್ಷುಬ್ಧಗೊಂಡಿರುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಮನಸ್ಸು ಶಾಂತಿ, ನೆಮ್ಮದಿ ದೊರೆಯುತ್ತದೆ. ಎಂಬುದನ್ನು ನಮ್ಮ ಹಿರಿಯರು ಅರಿತಿದ್ದರು ಎಂದು ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಹೇಳಿದರು.
ತಾಲೂಕಿನ ಕಲ್ಲೂರಿನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಮಂಗಳವಾರ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ದೇವಾಲಯದ ನಿರ್ಮಾಣದ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್ರೆಡ್ಡಿ, ಕೋಮುಲ್ ನಿರ್ದೇಶಕ ಕೆ.ಕೆ.ಮಂಜುನಾಥರೆಡ್ಡಿ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಮನೋಹರ್, ಸದಸ್ಯ ಬಿ.ಎಲ್.ವೆಂಕಟರೆಡ್ಡಿ, ಮುಖಂಡರಾದ ವಿಶ್ವನಾಥರೆಡ್ಡಿ, ಕೆ.ವಿ.ವೆಂಕಟರಾಮರೆಡ್ಡಿ ಇದ್ದರು.
ಕಲ್ಲೂರಿನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಕೆ.ಆರ್.ರಮೇಶ್ಕುಮಾರ್ ಪಾಲ್ಗುಂಡು ದೇವರ ದರ್ಶನ ಪಡೆದರು.

