ಬೆಳ್ಮಣ್ಣು: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಜೇಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಮತ್ತು ಮಹಿಳಾ ಜೇಸಿ ವಿಭಾಗದ ನೇತೃತ್ವದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ರವಿವಾರ ಶ್ರೀ ಕೃಷ್ಣಾಷ್ಟಮಿಯ ಪ್ರಯುಕ್ತ ಕೃಷ್ಣವೇಷ ಸ್ಪರ್ಧೆ ಜರಗಿತು. ಸ್ಪರ್ಧೆಯಲ್ಲಿ 110 ಮಕ್ಕಳು ಭಾಗವಹಿಸಿದ್ದರು.
ಜೇಸಿಐ ವಲಯಾಧಿಕಾರಿ ಪ್ರಶಾಂತ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಬೆಳ್ಮಣ್ಣು ಜೇಸಿಐ ಅಧ್ಯಕ್ಷೆ ಸರಿತಾ ದಿನೇಶ್ ಸುವರ್ಣ ಅವರ ಜಂಟಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಜೇಸಿಐ ವಲಯ ಉಪಾಧ್ಯಕ್ಷರಾದ ವಿಘ್ನೇಶ್ ಪ್ರಸಾದ್ ರಾವ್, ಬೈಲೂರು ಕ್ಷೇತ್ರದ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚ ಉಪಾಧ್ಯಕ್ಷರಾದ ಸುಹಾಸ್ ಶೆಟ್ಟಿ ಮುಟ್ಲುಪಾಡಿ, ಸಂಕಲಕರಿಯ ಅಮ್ಮ ಕ್ಯಾಟರರ್ಸ್ ಮಾಲಕರಾದ ಸೋಮನಾಥ ಪೂಜಾರಿ, ಬೋಳ ಪಡುಗಿರಿ ಮೋಹನ್ ಶೆಟ್ಟಿ, ಬೋಳ ದಿಣೇಶ್ ಆಚಾರ್ಯ, ಮಂಜರಪಲ್ಕೆ ಮಂಜುನಾಥ ಕನ್ಟ್ರೆಕ್ಷನ್ ಮಾಲಕರಾದ ರೇಣು ಪಕಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕಾರ್ಯಕ್ರಮದ ನಿರ್ದೇಶಕರಾದ ಸಂಧ್ಯಾ ಶೆಟ್ಟಿ, ಬೆಳ್ಮಣ್ಣು ಜೇಸಿಐ ಕಾರ್ಯದರ್ಶಿ ಸೌಜನ್ಯ ಕೋಟ್ಯಾನ್, ಮಹಿಳಾ ಜೇಸಿ ಸಂಯೋಜಕಿ ಶ್ವೇತಾ ಆಚಾರ್ಯ ಮೊದಲಾದವರು ವೇದಿಕೆಯಲ್ಲಿದ್ದರು. ಹೆಬ್ರಿ ಅಮೃತಾ ಭಾರತಿ ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ವೀಣೇಶ್ ಅಮೀನ್ ಅವರು ಕಾರ್ಯಕ್ರಮ ನಿರೂಪಿಸಿದರು.
ಸ್ಪರ್ಧೆಯು 0-02ವರ್ಷದೊಳಗಿನ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, 02-04ವರ್ಷದೊಳಗಿನ ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ, 04-06 ವರ್ಷದೊಳಗಿನ ಮಕ್ಕಳಿಗೆ ಚೆಲ್ವ ಕೃಷ್ಣ ಸ್ಪರ್ಧೆ ಹಾಗೂ 07 ವರ್ಷದೊಳಗಿನ ಮಗುವಿನೊಂದಿಗೆ ತಾಯಿ ಯಶೋಧ ಕೃಷ್ಣ ಸ್ಪರ್ಧೆ ನಡೆಸಲಾಯಿತು.
ನಿಟ್ಟೆ ವಿದ್ಯಾ ಸಂಸ್ಥೆಯ ಸುರೇಖಾ ಶೆಟ್ಟಿ, ಹಾಗೂ ವಂಜಾರಕಟ್ಟೆ ವಿದ್ಯಾ ಸಂಸ್ಥೆಯ ಆಶಾ ಅವರು ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ್ದರು.