

ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ (ಅಕ್ಟೋಬರ್ 5) ಪ್ರಯುಕ್ತ “ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಇವರು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ನೀಡುವ
ಶ್ರೀ ಗುರುಕುಲ ತಿಲಕ ಪುರಸ್ಕಾರ ಕ್ಕೆ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ ಯವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಗೆ ಆಯ್ಕೆಯಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.