ಕೆ.ಎಸ್‌.ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ : ಡಿ.ಕೆ.ಶಿವಕುಮಾರ್‌

JANANUDI.COM NETWORK

ಬೆಂಗಳೂರು: ಸಚಿವ ಕೆ.ಎಸ್‌.ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್‌ ಕಾಂಗ್ರೆಸ್ಸಿಗರನ್ನು ಆಗ್ರಹಿಸಿದ್ದಾರೆ.ದೇಶದ ಸ್ವಾಭಿಮಾನವನ್ನು, ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದ್ದು ನಮ್ಮ ಕರ್ತವ್ಯ ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಅವರು ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್‌, ರಾಷ್ಟ್ರದ್ರೋಹ ಎಸಗಿರುವ, ಸಂವಿಧಾನಕ್ಕೆ ಅಪಮಾನ ಮಾಡಿರುವ ಸಚಿವ
ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಕಳೆದ ನಾಲ್ಕು ದಿನಗಳಿಂದ ಪಟ್ಟು ಬಿಡದೆ ಸದನದಲ್ಲಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ನಡೆಸುತ್ತಿದೆ.
ಈ ಪ್ರತಿಭಟನೆಯ ಕಾವು ಹೆಚ್ಚಿಸಲು ಇದೀಗ ಪ್ರತಿ ತಾಲೂಕು, ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ತಿಳಿಸಿದ್ದಾರೆ. ಈ ಹೋರಾಟ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ಮುಂದುವರೆಸುವುದಾಗಿ ತಿಳಿಸಿದ್ದಾರೆ.