JANANUDI.COMNETWORK

ಕುಂದಾಪುರ,ಜ. ಇಲ್ಲಿನ ಸಂತ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕೀರ್ತನ್ ಹೆಣ್ಣು ಮಕ್ಕಳ ಕುರಿತು ಅರಿವು ಮೂಡಿಸಿದರು. ಸಂತ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆಯು ಈ ಕಾರ್ಯಕ್ರಮವನ್ನು ಜಂಟಿಯಾಗಿ ಆಚರಿಸಿದ್ದರು.
ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು. ಪ್ರೌಢಶಾಲೆ ಗೈಡ್ ಶಿಕ್ಷಕಿ ಸೆಲಿನ್ ಡಿಸೋಜಾ ಸ್ವಾಗತಿಸಿದರು. ಶಿಕ್ಷಕಿ ಶಾರದ ವಂದಿಸಿದರು.