ಕುಂದಾಪುರ/ಜಗಳೂರು(ಸೆ.09): ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮನನೊಂದ ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬವರ ಪುತ್ರ ಸಾಯೀಶ್ ಶೆಟ್ಟಿ(18) ಕುಂದಾಪುರ ಸಂಗಮ್ ಬಳಿಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ನೀಟ್ ಪರೀಕ್ಷೆ ಫಲಿತಾಂಶ ಬುಧವಾರ ರಾತ್ರಿಯಷ್ಟೇ ಪ್ರಕಟವಾಗಿತ್ತು. ಶಿವಮೊಗ್ಗದ ಕಾಲೇಜಲ್ಲಿ ಓದುತ್ತಿದ್ದ ಸಾಯೀಶ್ ಕಲಿಕೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದ.
ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಮತ್ತೊಂದು ಪ್ರಕರಣ
ಇದೇ ರೀತಿ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ನಡೆದಿದೆ. ಚೈತ್ರಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ