ಕುಂದಾಪುರ:ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಅಭಿನಂದನಾ ಸಭೆ

ಕುಂದಾಪುರ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕುಂದಾಪುರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಿ ’ಶಿಕ್ಷಣಾಧಿಕಾರಿಗಳು ಉಡುಪಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸ್ಥಳೀಯ ಸಂಸ್ಥೆಯಿಂದ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ,ಭಾಗವಹಿಸಿರುವ ಬಗ್ಗೆ ತಮ್ಮ ಸಂತೋಷವನ್ನು ಹಂಚಿಕೊಂಡರು .ಎಲ್ಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬಂದಿರುವ ಶಿಕ್ಷಕರ ಜವಾಬ್ದಾರಿಯನ್ನು ಹೊಗಳಿದರು. ಇದೇ ರೀತಿಯಲ್ಲಿ ಮುಂದೆಯೂ ಒಗ್ಗಟ್ಟಾಗಿ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗಿ ಹಾಗೂ ಇಂತಹ ಜವಾಬ್ದಾರಿಯುತ ಶಿಕ್ಷಕರಿಂದ ಸಂಸ್ಥೆಯು ಉತ್ತರೋತ್ತರ ಅಭಿವೃದ್ಧಿಯನ್ನು ಕಾಣಲಿ ಎಂದು ಆಶಿಸಿದರು. ಸ್ಥಳೀಯ ಸಂಸ್ಥೆ ವತಿಯಿಂದ ಭಾಗವಹಿಸಿದ ಪ್ರತಿಯೊಂದು ಶಾಲೆಯ ಶಿಕ್ಷಕ – ಶಿಕ್ಷಕಿಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಮ್ಮ ಸಂಸ್ಥೆಯಲ್ಲಿ ಸುಮಾರು 25 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಇದೀಗ 15 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಗುಣ ರತ್ನ ಮತ್ತು ಕಾರ್ಯದರ್ಶಿ ಶ್ರೀಮತಿ ರೇಖಾ ರವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲು ಹೊದಿಸಿ ಫಲ – ಪುಷ್ಪ ನೀಡಿ ಅಭಿನಂದಿಸಿದರು. ಸ್ಕೌಟ್ ಶಿಕ್ಷಕರಾದ ಶ್ರೀಯುತ ಯಶವಂತ್ ಹಾಗೂಶಿಕ್ಷಕಿ ಶ್ರೀಮತಿ ತಾರ ರವರು ಜಾಂಬೂರಿಯ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಶ್ರೀಮತಿ ಗುಣರತ್ನ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಜಾಂಬೂರಿಯ ಯಶಸ್ವಿಗೆ ಕಾರಣರಾದ ಎಲ್ಲರನ್ನೂ ಸ್ಮರಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿರುವ ಸರ್ ಮಿಲ್ಟನ್ ಉಪಸ್ಥಿತರಿದ್ದರು. ಶ್ರೀ ಸದಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಯುತ ಗಣೇಶ್ ಶೇಟ್ ವಂದಿಸಿದರು.