JANANUDI.COM NETWORK

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಯವರ ಪುಣ್ಯತಿಥಿ ಹಾಗೂ ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮದಿನಾಚರಣೆ ಕಾರ್ಯಕ್ರಮ ವನ್ನು ಆಚರಿಸಲಾಯಿತು. ಇದೇ ಸಂಧರ್ಭದಲ್ಲಿ ನಮ್ಮನ್ನಗಲಿದ ನಟ ಪುನೀತ್ ರಾಜ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನಾ ಪ್ರಾರ್ಥನೆ ನಡೆಸಲಾಯಿತು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಶ್ಯಾಮಲಾ ಭಂಡಾರಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಚಂದ್ರಶೇಖರ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರೆಗಾರ, ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಪುರಸಭಾ ಸದಸ್ಯ ಸುಭಾಶ್ ಪೂಜಾರಿ, ಪುರಸಭಾ ಸದಸ್ಯರಾದ ಕೆ. ಪ್ರಭಾವತಿ ಶೆಟ್ಟಿ, ಪಿ ದೇವಕಿ, ಚಂದ್ರಶೇಖರ ಖಾರ್ವಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಆಶಾ ಕರ್ವಾಲೋ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಡಿ ಸುನಿಲ್ ಪೂಜಾರಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ , ಸೇವಾದಳ ಘಟಕದ ಅಧ್ಯಕ್ಷ ಕುಮಾರ. ಕೆ, ಮುಖಂಡರಾದ ನಾಗರಾಜ ನಾಯ್ಕ, ಧರ್ಮಪ್ರಕಾಶ್, ಅಶೋಕ್ ಸುವರ್ಣ, ವಿವೇಕಾನಂದ, ಹೇರಿಕುದ್ರು ರಘುರಾಮ ನಾಯ್ಕ, ಜ್ಯೋತಿ ಡಿ. ನಾಯ್ಕ, ಹೇಮಾ ಪೂಜಾರಿ, ದಿನೇಶ್ ಬೆಟ್ಟ, ಅಭಿಜಿತ್ ಪೂಜಾರಿ, ಮಹಮ್ಮದ್ ಹುಸೇನ್, ಸಚಿನ್ ಕುಮಾರ್, ಅಡಾಲ್ಫ್ ಡಿ ಕೋಸ್ಟಾ, ಕೋಣಿ ನಿತಿನ್ ಡಿಸೋಜಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.