

ಕುಂದಾಪುರ ; ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ರಶ್ಮಿ ಎಅ.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ ಹೆಗ್ಡೆ, ಹಾಲಾಡಿ ಶ್ರೀನವಾಸ ಶೆಟ್ಟರು ಸ್ಪರ್ಧೆ ಮಾಡದೇ ಇರುವುದರಂದ ನಮಗೆ ಸುಲಭವಾಗಿದೆ. ಹಾಗೇ ಕಾಂಗ್ರೆಸ್ ಪಕ್ಷ ಗೆಲ್ಲುವ ವಾತವರಣ ಉಂಟಾಗಿದೆ, ಹಲವಾರು ಕಾರ್ಯಕ್ರಮಗಳನ್ನು ಎರ್ಪಡಿಸಿದ ಜೊತೆ, ಮಹಿಳಾ ಸಮಾವೇಶ ಯಶಸ್ವಿಯಾಗಿ ಎರ್ಪಟ್ಟಿದೆ. ಪ್ರತಾಪಚಂದ್ರ ಶೆಟ್ಟರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.