

ಕುಂದಾಪುರ (22.06.2024) : ಕುಂದಾಪುರ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟೀಚರ್ ಎಜ್ಯುಕೇಶನ್ ವಿಭಾಗವನ್ನು ಆರಂಭಿಸಲಾಗಿದೆ. ಒಂದು ವರ್ಷದ ಅವಧಿಯ ಪ್ರೈಮರಿ ಟೀಚರ್ ಟ್ರೈನಿಂಗ್, ಮೊಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್, ಅರ್ಲಿ ಚೈಲ್ಡ್ ಹುಡ್ ಎಜ್ಯುಕೇಶನ್, ಕಮ್ಯುನಿಕೇಶನ್ ಸ್ಕಿಲ್ಸ್ ಅಂಡ್ ಇಂಗ್ಲಿಷ್ ಸ್ಪೀಕಿಂಗ್ ಹಾಗೂ ಕೌನ್ಸ್ ಲಿಂಗ್ ಅಂಡ್ ಗೈಡೆನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳನ್ನು ನೀಡಲಾಗುವುದು. ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಎಲ್ಲಾ ತರಬೇತಿಗಳ ಪ್ರಯೋಜನ ಪಡೆದುಕೊಳ್ಳಬಹುದು. ಆಸಕ್ತರು ಅರ್ಜಿ ನಮೂನೆಯನ್ನು ಕುಂದೇಶ್ವರ ದೇವಸ್ಥಾನ ಸಮೀಪ ಅಥವಾ ಬಸ್ರೂರು ಮೂರ್ಕೈ ಕಛೇರಿಯಿಂದ ಪಡೆದು ಭರ್ತಿ ಮಾಡಿ (7975861619) ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.