ದಿನಾಂಕ-2-1-2023 ರಂದು ಉಪ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14/17 ರ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಈಕೆ ಕುಂದಾಪುರದ ಅರುಣ್ ಮತ್ತು ಲತಾ ಮಧ್ಯಸ್ಥ ದಂಪತಿಗಳ ಪುತ್ರಿ. ಇವಳ ಈ ಸಾಧನೆಗೆ ಶಾಲಾ ಜಂಟಿ ಕಾರ್ಯದರ್ಶಿಗಳಾದ ವಂ|ಸ್ಟ್ಯಾನಿ ತಾವ್ರೊ,ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗು ಅಧ್ಯಾಪಕ ವ್ರಂದದವರು ಅಭಿನಂದನೆ ಸಲ್ಲಿಸಿದ್ದಾರೆ.