ಕುಂದಾಪುರ: ಸಂತ ಮೇರೀಸ್ ಹಿ.ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

JANANUDI.COM NETWORK


ಕುಂದಾಪುರ, ಜೂ.21: “ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇಹ ಮತ್ತು ಮನಸ್ಸನ್ನು ಏಕಾಗ್ರತೆಯಲ್ಲಿ ಇಟ್ಟುಕೊಳ್ಳಲು ಯೋಗಾಭ್ಯಾಸವನ್ನು ಮಾಡಿಕೊಂಡರೆ ಅವರ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ದತ್ತಾತ್ರೇಯ ನಾಯ್ಕ್ ಕುಂದಾಪುರ ಇವರು ಸೈಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ. ಇಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ವಹಿಸಿದ್ದರು. ಶ್ರೀಮತಿ ಸಿಂತಿಯಾ ರಾಡ್ರಿಗಸ್ ಸ್ವಾಗತಿಸಿ , ಕುಮಾರಿ ಪ್ರೀತಿ ವಂದಿಸಿದರು. ಶ್ರೀಮತಿ ಜ್ಯೋತಿ ಡಿ’ಸಿಲ್ವ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಆನ್ನಿ ಕ್ರಾಸ್ತಾ,ಶ್ರೀಮತಿ ಗೀತಾ ನೊರೊನ್ನಾ ಮತ್ತು ಶಿಕ್ಷಕಿ ಶ್ರೀಮತಿ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.ಈ ಸಂಧರ್ಭದಲ್ಲಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರು ನೀಡಿದ ಮಾಸ್ಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.