JANANUDI.COM NETWORK

” ಪೃಕೃತಿಯ ಮೂಲಭೂತ ಸಂಗತಿಗಳನ್ನು ತಿಳಿಸುವ ಮೂಲಕ ಹೊಸ ಚಿಂತನೆಗೆ ದಾರಿ ಮಾಡಿಕೊಡುವ ವಿಜ್ಞಾನ ವಿಭಾಗದ ವಿಷಯಗಳ ಆಳದ ವಿಚಾರಗಳನ್ನು ಕಲಿಯುವಲ್ಲಿ ಸಿ.ಇ.ಟಿ, ಜೆ. ಇ. ಇ, ನೀಟ್ ಕೋಚಿಂಗ್ ಸಹಕಾರಿಯಾಗಿದೆ. ಇಂಥ ಕೋಚಿಂಗ್ ಪಡೆದ ಪರಿಣಿತರಿಗೆ ಉನ್ನತ ವ್ಯಾಸಂಗಕ್ಕೆ ಸಂಬಂಧ ಪಟ್ಟ ಸಂಶೋಧನಾ ಕೇಂದ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ ” ಎಂದು ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನ ಮಾಜಿ ಪ್ರಾಂಶುಪಾಲರು ಮತ್ತು ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಅನಂತ ಪದ್ಮನಾಭ ಭಟ್ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ. ಇ.ಟಿ, ಜೆ.ಇ.ಇ ಹಾಗೂ ನೀಟ್ ಕೋಚಿಂಗ್ ತರಬೇತಿಗಳನ್ನು ದೀಪ ಬೆಳಗಿಸುವುದರ ಮೂಲಕ ವಿಧ್ಯುಕ್ತವಾಗಿ
ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳು ಕೋಚಿಂಗ್ ತರಬೇತಿಗಳನ್ನು ಶ್ರದ್ಧೆಯಿಂದ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕರೆ ನೀಡಿದರು. ಗಣಿತ ಶಾಸ್ತ್ರ ಪ್ರಾಧ್ಯಾಪಕಿ ಶ್ರೀಮತಿ ಶುಭಾ ರವರು ಅತಿಥಿಗಳನ್ನು ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಅಕ್ಷತಾ ಕೆ. ಎನ್ ರವರು ಅತಿಥಿಗಳನ್ನು ಪರಿಚಯಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇಖಾ ಪುತ್ರನ್ ರವರು ಧನ್ಯವಾದ ಸಲ್ಲಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಾನೀಸ್ ನತಾಶಾ ಡಿಸೋಜಾ ರವರು ಕಾರ್ಯಕ್ರಮ ನಿರೂಪಿಸಿದರು.
