

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸ್ವರ್ಣ ಪಲ್ಲಕಿ ನಿರ್ಮಾಣಕ್ಕೆ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು.
ಕುಂದಾಪುರದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಭರಣ ಜ್ಯುವೆಲ್ಲರ್ಸ್‍ನ ಮಹೇಶ್ ಕಾಮತ್ ಅವರಿಗೆ ಪ್ರಸಾದ ನೀಡಿ ಜವಾಬ್ದಾರಿ ಒಪ್ಪಿಸುವ ಮೂಲಕ ಸ್ವಾಮೀಜಿಯವರು ಚಾಲನೆ ನೀಡಿದರು.
ದೇವಾಲಯದ ಆಡಳಿತ ಮೊಕ್ತೇಸರರಾದ ಕೆ. ರಾಧಾಕೃಷ್ಣ ಶೆಣೈ ಜತೆ ಮೊಕ್ತೇಸರರಾದ ಜನಾರ್ಧನ ಮಲ್ಯ, ತ್ರಿವಿಕ್ರಮ ಪೈ ಹಾಗೂ ಅಕ್ಷಯ ಶೆಣೈ, ಕೆ. ಪದ್ಮನಾಭ ಶೆಣೈ, ಯು. ಅರ್ಜುನ್ ಶೆಣೈ, ವಿನಾಯಕ ಪೈ, ರಮೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.