ಕುಂದಾಪುರ; “ಪಠ್ಯ ಶಿಕ್ಷಣ ಕಲಿಸುವ ಒಳಾಂಗಣ ಚಟುವಟಿಕೆಗಳಷ್ಟೇ ಪ್ರಮುಖವಾಗುವುದು ಆಟೋಟ- ಪಂದ್ಯಾಟಗಳಿಂದ ಮಕ್ಕಳ ಬೆಳವಣಿಗೆಗೆ ಹೊಸ ಆಯಾಮವನ್ನು ನೀಡುವ ಹೊರಾಂಗಣ ಚಟುವಟಿಕೆಗಳು. ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಈ ಎರಡೂ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿ ಮುಂಚೂಣಿಯಲ್ಲಿರುವುದು ಸಂತಸ ತಂದಿದೆ ” ಎಂದು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿದ ಶ್ರೀ ರವಿಶಂಕರ್ ಹೆಗ್ಡೆ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ,ಉಡುಪಿ ಜಿಲ್ಲೆ, ಇವರು ತಮ್ಮ ಉದ್ಘಾಟನಾ ನುಡಿಯಲ್ಲಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಕುಸುಮಾಕರ ಶೆಟ್ಟಿ, ತಾಲೂಕು ಕ್ರೀಡಾ ಮತ್ತು ಯುವಜನ ಅಧಿಕಾರಿ, ಕುಂದಾಪುರ, ಇವರು- ಕ್ರೀಡೆ ಎನ್ನುವುದು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಮರು ಪ್ರಯತ್ನಗಳು ಮತ್ತು ಹಲವು ಅವಕಾಶಗಳಿಗೆ ತಾವು ತೆರೆದುಕೊಳ್ಳುವ ಬಗ್ಗೆ ಕಲಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜು ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯರವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಕಾಲೇಜಿನ ಆಡಳಿತ ಮಂಡಳಿಯ ಜೊತೆ ಕಾರ್ಯದರ್ಶಿ ಶ್ರೀ ಕೆ. ಸುಧಾಕರ ಶೆಟ್ಟಿ ಭಾಂಡ್ಯ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಇಂಗ್ಲೀಷ್ ಉಪನ್ಯಾಸಕಿ ಸುಮತಿ ಶೆಣೈಯವರು ಪಥಸಂಚಲನ ಕಾರ್ಯಕ್ರಮವನ್ನು ನಿರ್ವಹಿಸದರು. ರಸಾಯನಶಾಸ್ತ್ರ ಉಪನ್ಯಾಸಕಿ ಜಾನೀಸ್ ನತಾಶಾ ಡಿಸೋಜಾ ರವರು ಕ್ರೀಡಾಜ್ಯೋತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಕ್ಷಮಾ ಗೌತಮ್ ಪ್ರತಿಜ್ಞಾ ವಿಧಿ ಬೋಧಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಇವರು ಧನ್ಯವಾದ ಸಲ್ಲಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕರಾದ ಅರುಣಾ ಐತಾಳ ಇವರು ಕಾರ್ಯಕ್ರಮ ನಿರೂಪಿಸಿದರು. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ವಿವೇಕ್ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ಶಾಂಭವಿ – ಇವರು ಕ್ರೀಡಾಗ್ರೇಸರರಾದರು.