

ಯುವಜನರನ್ನು ಮಾನಸಿಕ ಆರೋಗ್ಯ ಶಿಕ್ಷಣದಲ್ಲಿ ತೊಡಗಿಸಿಕೊಳ್ಳಲು ಮತ್ತು ಧ್ಯಾನವನ್ನು ನಿಯಮಿತ ಅಭ್ಯಾಸವಾಗಿ ತೆಗೆದುಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ‘ ಹರ್ ಘರ್ ಧ್ಯಾನ್ ‘ ಕಾರ್ಯಕ್ರಮವನ್ನು ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಯಿತು. ಆರ್ಟ್ ಆಪ್ ಲಿವಿಂಗ್ ನ ಉಡುಪಿ ಘಟಕದ ಸದಸ್ಯರಾದ ಶ್ರೀಮತಿ ಶೈಲಜಾ ಇವರು ಸುಧಾರಿತ ಆರೋಗ್ಯ ಮತ್ತು ಕ್ಷೇಮಕ್ಕಾಗಿ ಧಾನ್ಯ- ಸಂಬಂಧಿ ಕೆಲವು ಆಸನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಆರ್ಟ್ ಆಫ್ ಲಿವಿಂಗ್ ನ ಕುಂದಾಪುರ ಘಟಕದ ಸದಸ್ಯೆ ಶ್ರೀಮತಿ ಮಂಜುಶ್ರೀ ಇವರು ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ವಿವಿಧ ಆಸನಗಳ ಪ್ರಾತ್ಯಕ್ಷಿಕೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
