ಕುಂದಾಪುರದ ಆರ್. ಎನ್. ಶೆಟ್ಟಿ‌ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಕುಂದಾಪುರ: ‘ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸದಾ ಕಾರ್ಯಪ್ರವೃತ್ತವಾಗಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಆಶ್ರಯದಲ್ಲಿ ಆರಂಭಗೊಂಡ ಜ್ಯೂನಿಯರ್ ರೆಡ್ ಕ್ರಾಸ್ ಘಟಕವು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆರೋಗ್ಯ ಸಂಬಂಧಿ ತುರ್ತು ಸೇವೆಗಳ ಅರಿವು ಜೊತೆಗೆ ಮಾನವೀಯ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಬೆಳೆಸುವ ಉದ್ದೇಶ ಈ ಸಂಸ್ಥೆ ಹೊಂದಿದೆ ‘ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯವರು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನೂತನವಾಗಿ ಆರಂಭಿಸಿದ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.

ರೆಡ್ ಕ್ರಾಸ್ ಘಟಕದ ಸದಸ್ಯರಾದ ಶ್ರೀ ಸತ್ಯನಾರಾಯಣ ಪುರಾಣಿಕ್ ಇವರು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯೋದ್ದೇಶಗಳ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸೇವಾವಿಧಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಕಾರ್ಯದರ್ಶಿ ಶ್ರೀ ಸೀತಾರಾಮ್ ಶೆಟ್ಟಿ, ಸದಸ್ಯರಾದ ಶ್ರೀ ಶಿವರಾಮ ಶೆಟ್ಟಿ, ಇನ್ನೋರ್ವ  ಸದಸ್ಯರಾದ ಡಾ. ಸೋನಿ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಪಿ.ಯು.ಸಿ ವಿಭಾಗದ ಮಹಿಮಾ ಮತ್ತು ವೈಷ್ಣವಿ ಪ್ರಾರ್ಥನೆ ಹಾಡಿದರು. ಕಾಲೇಜಿನ ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ಶ್ರೀ ರವಿ ಉಪಾಧ್ಯ ಇವರು ಕಾರ್ಯಕ್ರಮ ನಿರ್ವಹಿಸಿದರು.