ಕುಂದಾಪುರ: “ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಮೆಡಿಕಲ್, ಎಂಜಿನಿಯರ್ ವ್ಯಾಸಂಗದಲ್ಲಿ ಪ್ರತಿಷ್ಠಿತ ಉನ್ನತ ಶಿಕ್ಷಣ ಮಹಾ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬೇಕೆನ್ನುವುದು ನಮ್ಮ ಸಂಸ್ಥೆಯ ಮಹದಾಶಯ. ಈ ನಿಟ್ಟಿನಲ್ಲಿ ಈಗ ಪುರಸ್ಕೃತರಾದ ವಿದ್ಯಾರ್ಥಿಗಳು ಮತ್ತು ಮುಂಬರುವ ವರ್ಷಗಳಲ್ಲಿ ಪಿ.ಯು.ಸಿ ಹಂತವನ್ನು ಮುಗಿಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಶೈಕ್ಷಣಿಕ ಪ್ರಗತಿಯ ಹೆಜ್ಜೆಗಳತ್ತ ಸಾಗಿಸುವ ಪ್ರಯತ್ನ ಯಶಸ್ವಿಯಾಗಿ ಸಾಗುತ್ತಿದೆ ” ಎಂದು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಕುಂದಾಪುರದ ಆರ್.ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಉತ್ಕ್ರಷ್ಟ(ಡಿಸ್ಟಿಂಕ್ಷನ್) ದರ್ಜೆಯಲ್ಲಿ ಪಾಸಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಲು ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಬಳಿಕ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕರೆ ನೀಡಿದರು.
ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯ ಇವರು ಪುರಸ್ಕ್ರತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸನ್ಮಾನಿತ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಳೆದತಮ್ಮ ಶೈಕ್ಷಣಿಕ ಜೀವನದ ಬಗ್ಗೆ ಅನಿಸಿಕೆ ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಶೆಣೈ, ಆಂಗ್ಲಭಾಷಾ ವಿಭಾಗ ಮುಖ್ಯಸ್ಥರಾದ ವನಿತಾ ಜೆ. ಶೆಟ್ಟಿ, ಕಂಪ್ಯೂಟರ್ ವಿಭಾಗ ಮುಖ್ಯಸ್ಥರಾದ ಶ್ರೀ ಸಂದೀಪ್ ಪೂಜಾರಿ, ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಜಾನೀಸ್ ನತಾಶಾ ಡಿ ಸೋಜಾ, ಗಣಿತಶಾಸ್ತ್ರ ಉಪನ್ಯಾಸಕಿ ಶುಭಾ. ಎಂ.ಜಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ, ರಸಾಯನ ಶಾಸ್ತ್ರ ಉಪನ್ಯಾಸಕಿಯರಾದ ಅಕ್ಷತಾ ಶೆಟ್ಟಿ ಮತ್ತು ರೇವತಿ ಕಾಮತ್, ಜೀವಶಾಸ್ತ್ರ ಉಪನ್ಯಾಸಕಿ ಕವಿತಾ ಇವರು ಸನ್ಮಾನಿಸಲ್ಪಡುವ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ನಾಗರತ್ನಾ ಪ್ರಾರ್ಥನೆ ಹಾಡಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥೆ ರೇಖಾ ಪುತ್ರನ್ ಧನ್ಯವಾದ ಸಲ್ಲಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ದರ್ಜೆ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
“ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಮೆಡಿಕಲ್, ಎಂಜಿನಿಯರ್ ವ್ಯಾಸಂಗದಲ್ಲಿ ಪ್ರತಿಷ್ಠಿತ ಉನ್ನತ ಶಿಕ್ಷಣ ಮಹಾ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬೇಕೆನ್ನುವುದು ನಮ್ಮ ಸಂಸ್ಥೆಯ ಮಹದಾಶಯ. ಈ ನಿಟ್ಟಿನಲ್ಲಿ ಈಗ ಪುರಸ್ಕೃತರಾದ ವಿದ್ಯಾರ್ಥಿಗಳು ಮತ್ತು ಮುಂಬರುವ ವರ್ಷಗಳಲ್ಲಿ ಪಿ.ಯು.ಸಿ ಹಂತವನ್ನು ಮುಗಿಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಶೈಕ್ಷಣಿಕ ಪ್ರಗತಿಯ ಹೆಜ್ಜೆಗಳತ್ತ ಸಾಗಿಸುವ ಪ್ರಯತ್ನ ಯಶಸ್ವಿಯಾಗಿ ಸಾಗುತ್ತಿದೆ ” ಎಂದು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಕುಂದಾಪುರದ ಆರ್.ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಉತ್ಕ್ರಷ್ಟ(ಡಿಸ್ಟಿಂಕ್ಷನ್) ದರ್ಜೆಯಲ್ಲಿ ಪಾಸಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಲು ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಬಳಿಕ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕರೆ ನೀಡಿದರು.
ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯ ಇವರು ಪುರಸ್ಕ್ರತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸನ್ಮಾನಿತ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಳೆದತಮ್ಮ ಶೈಕ್ಷಣಿಕ ಜೀವನದ ಬಗ್ಗೆ ಅನಿಸಿಕೆ ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಶೆಣೈ, ಆಂಗ್ಲಭಾಷಾ ವಿಭಾಗ ಮುಖ್ಯಸ್ಥರಾದ ವನಿತಾ ಜೆ. ಶೆಟ್ಟಿ, ಕಂಪ್ಯೂಟರ್ ವಿಭಾಗ ಮುಖ್ಯಸ್ಥರಾದ ಶ್ರೀ ಸಂದೀಪ್ ಪೂಜಾರಿ, ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಜಾನೀಸ್ ನತಾಶಾ ಡಿ ಸೋಜಾ, ಗಣಿತಶಾಸ್ತ್ರ ಉಪನ್ಯಾಸಕಿ ಶುಭಾ. ಎಂ.ಜಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ, ರಸಾಯನ ಶಾಸ್ತ್ರ ಉಪನ್ಯಾಸಕಿಯರಾದ ಅಕ್ಷತಾ ಶೆಟ್ಟಿ ಮತ್ತು ರೇವತಿ ಕಾಮತ್, ಜೀವಶಾಸ್ತ್ರ ಉಪನ್ಯಾಸಕಿ ಕವಿತಾ ಇವರು ಸನ್ಮಾನಿಸಲ್ಪಡುವ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ನಾಗರತ್ನಾ ಪ್ರಾರ್ಥನೆ ಹಾಡಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥೆ ರೇಖಾ ಪುತ್ರನ್ ಧನ್ಯವಾದ ಸಲ್ಲಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.