

ಕುಂದಾಪುರ “ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು ನೀಡಲು ಮುಂದಾಗಬೇಕು” ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ, ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಖಜಾಂಚಿಯವರಾದ ಶ್ರೀ ಶಿವರಾಮ್ ಶೆಟ್ಟಿಯವರು ರೆಡ್ಕ್ರಾಸ್ ಸೇವಾತತ್ವಗಳ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕುಂದಾಪುರದ ರೆಡ್ ಕ್ರಾಸ್ ಘಟಕದ ಉದಾರತೆ ಮತ್ತು ಸೇವಾಕಾರ್ಯಗಳನ್ನು ಸ್ಮರಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರು ಮತ್ತು ಖಜಾಂಚಿಯವರು ಪ್ರಥಮ ಚಿಕಿತ್ಸಾ ಕಿಟ್ ನ್ನು ಕಾಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ಶ್ರೀ ರವಿ ಉಪಾಧ್ಯ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು.