” ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಬಡ್ಡಿ ಪಂದ್ಯವು ಎಲ್ಲ ಜಿಲ್ಲೆಗಳ ಮೂಲೆ ಮೂಲೆಗಳಲ್ಲೂ ಪಸರಿಸುವಲ್ಲಿ ಇಂಥ ರೋಚಕ ಪಂದ್ಯಾಟಗಳು ಸಹಕಾರಿಯಾಗಿವೆ. ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ್ ನಕ್ಕತ್ತಾಯ ಇವರು ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ -ಇದರ ಸಹಯೋಗದಲ್ಲಿ ಆಯೋಜಿಸಲಾದ
ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯವರಾದ ಶ್ರೀ ಕುಸುಮಾಕರ ಶೆಟ್ಟಿಯವರು ವಿದ್ಯಾರ್ಥಿಗಳು ಕ್ರೀಡೆಯನ್ನು ಜೀವನದ ಒಂದು ಮುಖ್ಯ ಭಾಗವಾಗಿ ಪರಿಗಣಿಸಿದರೆ ಸಧೃಢ ಪ್ರಜೆಯಾಗಬಹುದೆಂದು ತಿಳಿಸಿದರು. ಕುಂದಾಪುರದ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ನಾಗರಾಜ ಶೆಟ್ಟಿ ಯವರು ಪಂದ್ಯಾಟಕ್ಕೆ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿ ಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಕ್ರೀಡೆಯ ಕೆಲವು ತತ್ವಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ನಾಗರೀಕರಾಗಲು ಸಾಧ್ಯ ಎಂದು ಕರೆ ನೀಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಕಾರ್ಯಕ್ರಮವನ್ನು ನಿರ್ವಹಿದರು.