

ಕುಂದಾಪುರ; ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆ ಸ್ಪರ್ಧೆಯಲ್ಲಿ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಶ್ರೀಮಂಜುನಾಥ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿ ಶ್ರೀಮಂಜುನಾಥ್ ಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್ ಸುಕುಮಾರ ಶೆಟ್ಟಿಯವರು, ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.