

ಕುಂದಾಪುರ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಟೇಬಲ್ ಟೆನಿಸ್ ತಂಡದ ವಿದ್ಯಾರ್ಥಿನಿಯರಾದ ವಿಜ್ಞಾನ ವಿಭಾಗದ ಕ್ಷಮಾ ಗೌತಮ್, ಅಂಕಿತಾ ಹಾಗೂ ವಾಣಿಜ್ಯ ವಿಭಾಗದ ದೀಪ್ತಿಯವರಿಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.