

ಕುಂದಾಪುರ, ದಿ 10-11-2023 ರಂದು ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು.
ವಾದ್ಯ ವೃಂದದೊಂದಿಗೆ ಪಥಸಂಚಲನ ನಡೆಯಿತು. ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷರಾದ ರೋ, ಜಗನ್ನಾಥ್ ಮೊಗೇರ ಇವರು ಕ್ರೀಡೋತ್ಸವ ಉದ್ಘಾಟಿಸಿ ಹಾಗೂ ಜ್ಯೋತಿಯನ್ನು ಬೆಳಗಿಸಿ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಳುಗಳು ಶಾಲಾ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ತಿಳಿದರು. ಮುಖ್ಯ ಅತಿಥಿಗಳಾದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಪ್ರೇಮಿಕ ಇವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಶಿಸ್ತು ಬೆಳೆಯಲು ಕ್ರೀಡೋತ್ಸವ ಸಹಾಯಮಾಡುತ್ತದೆ ಎಂದರು. ಅಧ್ಯಕ್ಷರಾದ ಶಾಲಾ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಸುಪ್ರಿಯ ಇವರು ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಕ್ರೀಡೆಯಿಂದಾಗಿ ವಿದ್ಯಾರ್ಥಿಗಳು ಹೆಚ್ಚಿನ ಶಕ್ತಿಯನ್ನು ಹೊಂದುತ್ತಾರೆ ಹಾಗೂ ಆರೋಗ್ಯಕರವಾಗಿರುತ್ತಾರೆ ಎಂದರು. ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಐವಿ ಇವರು ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ರವಿ ಪೂಜಾರಿ ಇವರು ಶುಭ ಹಾರೈಸಿದರು. ದೈಹಿಕ ಶಿಕ್ಷಕರಾದ ಮೈಕಲ್ ಇವರು ನಿರೂಪಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಸಹಕರಿಸಿದರು.














