

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯ ಪ್ರಸಕ್ತ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜೂ, 28ರಂದು ನೆರವೇರಿತು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸುಪ್ರಿಯ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಸಂಸತ್ತನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ‘ಒಗ್ಗಟ್ಟಿನಲ್ಲಿ ಬಲವಿದೆ’ ಮಂತ್ರಿಮಂಡಲದ ಚುನಾಯಿತ ವಿದ್ಯಾರ್ಥಿಗಳು ಒಮ್ಮನಸ್ಸಿನಿಂದ ಒಂದುಗೂಡಿ ಕೆಲಸ ಮಾಡಿದರೆ ಶೈಕ್ಷಣಿಕ ಕಾರ್ಯಗಳು ಚೆನ್ನಾಗಿ ನಡೆಯುತ್ತವೆ ಎಂದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಶಾಲಾ ಸಂಸತ್ತಿನ ನಾಯಕ ಹಾಗೂ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಶಾಲಾ ನಾಯಕಿ ಸ್ಪಂದನ ಇವರು ಕಾರ್ಯಕ್ರಮ ನಿರೂಪಿಸಿದರು. ರಂಜಿತಾ ಸ್ವಾಗತಿಸಿದರು. ಸಾತ್ವಿಕ್ ಧನ್ಯವಾದ ಸಮರ್ಪಿಸಿದರು ದೈಹಿಕ ಶಿಕ್ಷಕರಾದ ಮೈಕಲ್ ಪುಟಾರ್ಡೊ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.







