ಕುಂದಾಪುರ, ಜೂ.: ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ. ತಮ್ಮ ವೃತ್ತಿಯಲ್ಲಿ ಪ್ರಮಾಣಿಕ ಕೆಲಸ ಮಾಡಿದಾಗ ಎಲ್ಲರೂ ಗುರುತಿಸುತ್ತಾರೆ. 38 ವರ್ಷಗಳ ಕಾಲ ಶಿಕ್ಷಕರಾಗಿ ವಯೋನಿವೃತ್ತಿಗೊಂಡ ಭಾಸ್ಕರ ಗಾಣಿಗ ಸೇವೆ ಅನನ್ಯವಾಗಿದೆ ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಸಂಚಾಲಕರು,ಕುಂದಾಪುರ ವಲಯದ ಧರ್ಮಗುರುಗಳು ಆದ ಅತೀ ವಂ.ಫಾ.ಪಾವ್ಲ್ ರೇಗೊ ಹೇಳಿದರು. ಅವರು ಜೂನ್ ೨೮ ರಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಗೊಂಡ ಭಾಸ್ಕರ ಗಾಣಿಗ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಲೂಯಿಸ್ ಜೆ.ಫರ್ನಾಂಡೀಸ್ ಅಭಿನಂದನಾ ಮಾತುಗಳನ್ನಾಡಿದರು.ವಿದ್ಯಾರ್ಥಿಗಳಾ ಆಯುಷ್, ಅರ್ಚನಾ,ಶಿಕ್ಷಕಿ ಸ್ಮಿತಾ ಡಿ ಸೋಜಾ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.ವೇದಿಕೆಯಲ್ಲಿ
ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಾಂತಿ ಬರಟ್ಟೋ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫರ್ನಾಂಡೀಸ್, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ತೆರೆಜಾ ಶಾಂತಿ, ಕಿಡಂರ್ ಗಾರ್ಟಿನ್ ಮುಖ್ಯ ಶಿಕ್ಷಕಿ ಶೈಲಾ ಲೂಯಿಸ್, ಭಾಸ್ಕರ ಗಾಣಿಗ ಪತ್ನಿ ವಿಜಯ ಗಾಣಿಗ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ಸ್ವಾಗತಿಸಿದರು.ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಸಿಸ್ಟರ್ ಚೇತನ ವಂದಿಸಿದರು.ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.