ಕುಂದಾಪುರ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು ಶಿಕ್ಷಕರು ನೀಡುವ ಶಿಕ್ಷಣ ವಿದ್ಯಾರ್ಥಿಗಳನ್ನು ಸಂಪೂರ್ಣವಾಗಿ ಸಂಸ್ಕಾರಯುತ ಮೌಲ್ಯಗಳನ್ನು ಕಲಿಸಿ, ಬದುಕನ್ನು ನಿರೂಪಿಸುವ ಪವಿತ್ರ ವೃತ್ತಿಯಾಗಿದೆ’ ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಸಂಚಾಲಕ ಅತೀ ವಂ.ಫಾ.ಸ್ಟ್ಯಾನಿ ತಾವ್ರೋ ಹೇಳಿದರು.
ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಪ್ರಯುಕ್ತ ನಡೆದ
ಪೋಷಕ ಶಾಲೆಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷಕರನ್ನು ಗುರುತಿಸುವ ಗುರು ವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯದ ಮಾತುಗಳನ್ನಾಡಿದರು.ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಅಚ್ಲಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ “ಆದರ್ಶ ಶಿಕ್ಷಕ ಪ್ರಶಸ್ತಿ” ಪುರಸ್ಕ್ರತ ಕುಂದಾಪುರ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೊರತಿ ಸುವಾರಿಸ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಶಿಕ್ಷಕಿ ಸುಶೀಲಾ ಖಾರ್ವಿ ಸ್ವಾಗತಿಸಿದರು.ಶಿಕ್ಷಕಿ ಸ್ಮಿತಾ ಡಿ.ಸೋಜಾ ವಂದಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.